1 ರೂ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಗೆ 1 ರೂ. ದಂಡ ವಿಧಿಸಿದೆ.
ಭಾರತೀಯ ಮುಖ್ಯ ನ್ಯಾಯಮೂರ್ತಿ ಅವರನ್ನು ಟೀಕಿಸಿ ನ್ಯಾಯಾಂಗ ನಿಂದನೆ ಆರೋಪ ಎದುರಿಸಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸರ್ವೋಚ್ಚ ನ್ಯಾಯಾಲಯ 1 ರೂ. ದಂಡ ವಿಧಿಸಿದೆ.
ನ್ಯಾ| ಅರುಣ್ ಮಿಶ್ರ ಅವರಿದ್ದ ಸುಪ್ರೀಂ ನ್ಯಾಯಪೀಠ ಈ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಅವರನ್ನ ಟೀಕಿಸಿ ಪ್ರಶಾಂತ್ ಭೂಷಣ್ ಎರಡು ಟ್ವೀಟ್ ಪೆÇೀಸ್ಟ್ ಮಾಡಿದ್ದರು.
ಇವು ನ್ಯಾಯಾಂಗದ ಗೌರವಕ್ಕೆ ಧಕ್ಕೆ ತರುವಂತಿವೆ ಎಂದು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತು.
ನ್ಯಾ| ಅರುಣ್ ಮಿಶ್ರಾ ಅವರ ನ್ಯಾಯಪೀಠ ವಿಚಾರಣೆ ನಡೆಸಿ ಪ್ರಶಾಂತ್ ಭೂಷಣ್ ದೋಷಿ ಎಂದು ತೀರ್ಮಾನಿಸಿತ್ತು.
ತಮ್ಮ ಹೇಳಿಕೆಗೆ ಕ್ಷಮೆ ಕೋರುವಂತೆ ಪ್ರಶಾಂತ್ ಭೂಷಣ್ ಗೆ 3 ದಿನ ಕಾಲಾವಕಾಶವನ್ನು ನ್ಯಾಯಾಲಯ ನೀಡಿತ್ತು.
ಆದರೆ, ಪ್ರಶಾಂತ್ ಭೂಷಣ್ ತಾನು ಕ್ಷಮೆ ಕೇಳುವುದಿಲ್ಲ. ನೀವು ಏನೇ ಶಿಕ್ಷೆ ಕೊಟ್ಟರೂ ಸ್ವೀಕರಿಸುತ್ತೇನೆ ಎಂದು ಹೇಳಿದರು.