ಪುಂಡಾಟ ಮಾಡುವವರ ವಿರುದ್ಧ ಕಠಿಣ ಕ್ರಮ – ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಳಗಾವಿ:ಯಾರೇ ಪುಂಡಾಟಿಕೆ ಮಾಡಿರಲಿ ಅಂತಹವರ  ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿಯಲ್ಲಿ ಸೋಮವಾರ  ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,

ಪುಂಡರ ಪುಂಡಾಟಿಕೆ ಸಹಿಸುವುದಿಲ್ಲ, ಇದನ್ನು ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು  ಕೈಗೊಳ್ಳುತ್ತೇವೆ, ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು  ಬೊಮ್ಮಾಯಿ ಖಡಕ್ ಆಗಿ ಹೇಳಿದರು.

ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.

ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.