ಬೆಳಗಾವಿ: ಮೇಕೆದಾಟು ಯೋಜನೆಗೆ ಒತ್ತಾಯಿಸಿ ಮುಂದಿನ ವರ್ಷ ಜನವರಿ 9 ರಿಂದ 19ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಹಳ ವರ್ಷದಿಂದ ಮೇಕೆದಾಟು ಯೋಜನೆಗಾಗಿ ಹೋರಾಟ ನಡೆಯುತ್ತಿದೆ.ನಾನು ನೀರಾವರಿ ಸಚಿವನಾಗಿ ದ್ದಾಗ ಯೋಜನೆ ಅಪ್ರುವಾಯ್ತು. ಇದರಿಂದ ಎರಡೂ ರಾಜ್ಯದ ರೈತರಿಗೆ ಅನುಕೂಲವಾಗುತ್ತೆ ಎಂದು ಹೇಳಿದರು.
ಜನವರಿ 9ರಿಂದ ಪಾದಯಾತ್ರೆ ಆರಂಭವಾಗಲಿದೆ. ಐದು ದಿನ ಸಿಟಿಯಲ್ಲಿ ಪಾದಯಾತ್ರೆ ಮಾಡುತ್ತೇವೆ. ಅಪಾರ್ಟ್ಮೆಂಟ್‌ನಲ್ಲಿ ಇರುವವರು ಹಾಗೂ ಇತರೆ ಜನರು ಕರೆ ಮಾಡಿ ಪಾದಯಾತ್ರೆಯಲ್ಲಿ ಭಾಗವಹಿಸುವುದಾಗಿ ಹೇಳುತ್ತಿದ್ದಾರೆ ಎಂದರು.
ಸಮಾಜ ಸೇವಕರು, ಸಾಹಿತಿಗಳು ಭಾಗವಹಿಸುವಂತೆ ಆಹ್ವಾನ ನೀಡುತ್ತಿದ್ದೇವೆ ಎಂದು ಡಿಕೆಶಿ ತಿಳಿಸಿದರು.
ಮೇಕೆದಾಟು ಯೋಜನೆಗಾಗಿ ಪಕ್ಷಾತೀತಾವಾಗಿ ಪಾದಯಾತ್ರೆ ಮಾಡುತ್ತಿರುವುದರಿಂದ ಯಾವ ಸಂಘಟನೆಯಾದರೂ ಪಾಲ್ಗೊಳ್ಳಬಹುದು ಎಂದು ಹೇಳಿದರು.
ನಮ್ಮ ರೈತರು ಹಾಗೂ ತಮಿಳುನಾಡು ರೈತರ ರಕ್ಷಣೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಕ್ಕಾಗಿ ಪಾದಯಾತ್ರೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

