ಶ್ರೀನಗರ ಎನ್ಕೌಂಟರ್ನಲ್ಲಿ ಉಗ್ರ ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ  ಉಗ್ರಗಾಮಿಯೊಬ್ಬ ಹತನಾಗಿದ್ದಾನೆ.

ಅನಂತನಾ‌‌ಗ್  ಜಿಲ್ಲೆಯ ಅರ್ವಾನಿ ಪ್ರದೇಶದ ಮುಮನ್‍ಹಲ್ ಗ್ರಾಮದಲ್ಲಿ ಉಗ್ರಗಾಮಿಗಳು ತಂಗಿರುವ ಮಾಹಿತಿ ಸಿಕ್ಕಿದ್ದು ತಕ್ಷಣ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯ ಪ್ರಾರಂಭಿಸಿದವು.

ಆಗ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಲಾರಂಭಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಒಬ್ಬ ಉಗ್ರ ಹತನಾದ ಎಂದು  ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ

ಕಾರ್ಯಾಚರಣೆ ಮುಂದುವರಿದಿದೆ. ಮೃತ ಉಗ್ರನ ಗುರುತು ಮತ್ತು ಆತನು ಯಾವ ಸಂಘಟನೆಗೆ ಸೇರಿದವನೆಂಬುದು ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.