ಮುಖ್ಯಮಂತ್ರಿ ಬದಲಾವಣೆ ಊಹಾಪೋಹ -ಜೋಶಿ

ಹುಬ್ಬಳ್ಳಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಿಲ್ಲ. ಉಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಂದ್ರ ವರಿಷ್ಠರ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಮುಖ್ಯಮಂತ್ರಿಯವರು ಅಮೇರಿಕಾ ಹೋಗುತ್ತಾರೆ, ಅವರನ್ನು ಅಧಿಕಾರಿದಿಂದ ಕೆಳಗಿಳಿಸುತ್ತಾರೆ ಎಂಬುದು ಬರೀ ವದಂತಿ ಎಂದು ಅವರು ತಿಳಿಸಿದರು.

ಯಾರೋ ಸುಳ್ಳು ವದಂತಿ ಹರಡುತ್ತಿದ್ದಾರೆ ಎಂದು ಜೋಶಿ ಅವರು ಹೇಳಿದರು.

ಸಂಸತ್ ಸದನದಲ್ಲಿ ಪ್ರತಿಪಕ್ಷಗಳ ವರ್ತನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಸಂಸತ್ ಸದನದಲ್ಲಿ ಪ್ರತಿಪಕ್ಷಗಳ ವರ್ತನೆಗೆ ವಿಷಾದ ವ್ಯಕ್ತಪಡಿಸಿ ಅಂದರೂ ಕಾಂಗ್ರೆಸ್ ಕೇಳಲಿಲ್ಲ, ಮೋದಿ ಅವರು ಏನೇ ಮಾಡಿದರೂ ಕಾಂಗ್ರೆಸ್ ವಿರೋಧ ಮಾಡುತ್ತೆ. ಮೋದಿ ಪೋಬಿಯಾ ಎಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತೆ ಎಂದು ಹೇಳಿದರು.