ಮೈಸೂರು: ರಾಜ್ಯದಾದ್ಯಂತ ಜಾರಿಗೊಳಿಸಿರುವ ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಲ್ಲಿ ಸಿಎಂ ಭಾವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮುಂದಿನ ಫೆಬ್ರವರಿಯಲ್ಲಿ ಓಮಿಕ್ರಾನ್ ಕೇಸ್ ಜಾಸ್ತಿ ಆಗಬಹುದು ಎಂಬುದು ಅಂದಾಜು ಮಾಡಲಾಗಿದೆ. ಆದರೆ ಅದಕ್ಕೆ ಪೂರಕವಾದ ದಾಖಲೆ ಇಲ್ಲ. ಅದಾಗ್ಯೂ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ ಎಂದು ಸಿಎಂ ತಿಳಿಸಿದರು.
ರಾಜ್ಯದಾದ್ಯಂತ ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ ಎಂದ ಮುಖ್ಯಮಂತ್ರಿಗಳು, ಅಕ್ಕ ಪಕ್ಕದ ರಾಜ್ಯಗಳಲ್ಲಿನ ಕೊರೊನಾ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಇದರೊಂದಿಗೆ ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ಉದ್ಯಮಿಗಳಿಗೆ ನಷ್ಟವಾಗುತ್ತದೆ ಅನ್ನೋದು ಗಮನಕ್ಕೆ ಬಂದಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಕರ್ಫ್ಯೂ ನಿಯಮದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಎಂ ತಿಳಿಸಿದರು.

