ಜೈಷ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರಗಾಮಿಗಳ ಹತ್ಯೆ

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರಗಾಮಿಗಳು ಹತರಾಗಿದ್ದಾರೆ.

ಈ ಮೂವರ ಸಾವು ಸೇರಿ ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಗುಂಡಿನ ಕಾಳಗದಲ್ಲಿ ಬಲಿಯಾದ ಉಗ್ರರ ಸಂಖ್ಯೆ 6ಕ್ಕೇರಿದೆ. ಕುಲ್ಗಾಮ್ ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರು ಹತರಾಗಿದ್ದರು.

ಅನಂತನಾಗ್ ಜಿಲ್ಲೆಯ ನೌಗಾಮ್ ಮತ್ತು ಷಹಾಬಾದ್‍ನಲ್ಲಿ ಉಗ್ರರು ಇರುವ ಬಗ್ಗೆ  ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಬುಧವಾರ ರಾತ್ರಿ ಮುತ್ತಿಗೆ ಹಾಕಿ ಶೋಧಕಾರ್ಯ ಆರಂಭಿಸಿದವು.

ಈ ವೇಳೆ ಉಗ್ರರು ಗುಂಡು ಹಾರಿಸಿ ಪ್ರತಿ ದಾಳಿ ಆರಂಭಿಸಿದರು.

ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದು ಒಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.