ಬಿಜೆಪಿಗೂ ಹೆಚ್ಚಿನ ಬೆಂಬಲ ಸಿಕ್ಕಿದೆ: ಫಲಿತಾಂಶ ಸಮರ್ಥಿಸಿಕೊಂಡ ಶೆಟ್ಟರ್

ಹುಬ್ಬಳ್ಳಿ:ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಗೂ ಹೆಚ್ಚಿನ‌ ಬೆಂಬಲ ಸಿಕ್ಕಿದೆ ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಅವರು  ಮಾತನಾಡಿದರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆ ವಿಚಾರ ಕುರಿತು ಪ್ರತಿ ಕ್ರಿಯಿಸಿದ ಅವರು,ಅಲ್ಲಿನ ಸ್ಥಳೀಯ ಹಿತಾಸಕ್ತಿಗೆ ಅನುಗುಣವಾಗಿ ಚುನಾವಣೆಗಳು ನಡೆದಿರುತ್ತವೆ‌ ಎಂದು ಹೇಳಿದರು.

ವೈಯಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ,ಬೇರೆ ಬೇರೆ ನಗರಸಭೆ ಮತ್ತು ಪುರಸಭೆಗಳಲ್ಲಿ ನಮ್ಮ ಸ್ಥಾನಗಳ ಪ್ರಮಾಣ ಹೆಚ್ಚಾಗಿದೆ ಎಂದರು.

ವಿಧಾನ ಪರಿಷತ್ ಚುನಾವಣೆಯಲ್ಲೂ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗಳಿಸಿದ್ದೇವೆ, ನಮ್ಮ ಪಕ್ಷ ಹೆಚ್ಚು ಪ್ರಗತಿ ಸಾಧಿಸಿದೆ ಎಂದು ತಿಳಿಸಿದರು.

ಬಿಜೆಪಿ ಶಾಸಕರಿದ್ದ ಕಡೆ ನಿರೀಕ್ಷಿತ ಫಲಿತಾಂಶ ಬಾರದ ವಿಚಾರಕ್ಕೆ ಕಾಂಗ್ರೆಸ್ ಶಾಸಕರಿದ್ದ ಕಡೆ ಅವರು ಹೆಚ್ಚಿನ‌ ಸ್ಥಾನ ಗೆದ್ದಿದ್ದಾರಾ ? ಸ್ಥಳೀಯ ಸಂಸ್ಥೆಗಳಲ್ಲಿ ಈ ರೀತಿಯ ಫಲಿತಾಂಶ ಸಹಜ ಎಂದು ಸಮರ್ಥಿಸಿಕೊಂಡರು.

ಹಿನ್ನಡೆ ಆಗಿರುವ ಕುರಿತು ಪರಾಮರ್ಶೆ ಮಾಡುತ್ತೇವೆ ಎಂದರು.

ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅದು ಅವರ ವೈಯಕ್ತಿಕ ವಿಚಾರ. ಅವರ ವಿಚಾರಗಳನ್ನ ಹೇಳಲು ಮುಕ್ತ ಅವಕಾಶವಿದೆ ಎಂದರು.

ಈ ರೀತಿ ಹೇಳಿಕೆ ನೀಡೋದು ಪಕ್ಷ ವಿರೋಧಿ ಚಟುವಂಟಿಕೆ ಎನ್ನಲಾಗಲ್ಲ,

ನನ್ನ ವೈಯಕ್ತಿಕ ಅಭಿಪ್ರಾಯವನ್ನ ಪಕ್ಷದ ಆಂತರಿಕ ಸಭೆಯಲ್ಲಿ ವ್ಯಕ್ತಪಡಿಸುತ್ತೇನೆ ಎಂದು ಶೆಟ್ಟರ್ ತಿಳಿಸಿದರು.