ಶ್ರೀನಗರ: ಶ್ರೀನಗರದ ಪಂಥ್ ಚೌಕ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಜೈಷ್- ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮೂವರು ಉಗ್ರರು ಮೃತಪಟ್ಟಿದ್ದಾರೆ.
ದಾಳಿ ವೇಳೆ ನಾಲ್ಕು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದ ಉಗ್ರರಲ್ಲಿ ಒಬ್ಬ ಶ್ರೀನಗರಕ್ಕೆ ಸಮೀಪದ ಝೇವಾನ್ ಪ್ರದೇಶದಲ್ಲಿ ಡಿ.13ರಂದು ನಡೆದ ಬಸ್ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸ್ ಅಧಿಕಾರಿ ಯೊಬ್ಬರು ಹೇಳಿದ್ದಾರೆ.
ಮೂವರು ಉಗ್ರರಲ್ಲಿ ಒಬ್ಬನನ್ನು ನಿಷೇಧಿತ ಉಗ್ರಗಾಮಿ ಸಂಘಟನೆ ಜೆಇಎಂನ ಸುಹೈಲ್ ಅಹ್ಮದ್ ರಾಥರ್ ಎಂದು ಗುರುತಿಲಾಗಿದೆ.
ಈತ ಝೇವಾನ್ ದಾಳಿಯಲ್ಲಿ ಪಾಲ್ಗೊಂಡಿದ್ದ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯಕುಮಾರ್ ಸ್ಪಷ್ಟಪಡಿಸಿದ್ದಾರೆ.
ಝೇವಾನ್ ದಾಳಿಯಲ್ಲಿ ಪಾತ್ರ ವಹಿಸಿದ್ದ ಎಲ್ಲ ಉಗ್ರರನ್ನು ದಮನ ಮಾಡಲಾಗಿದೆ. ಆ ದಾಳಿ ನಡೆಸಿದ್ದ ಇಬ್ಬರು ಉಗ್ರರು ಗುರುವಾದ ಅನಂತನಾಗ್‍ನಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಬಲಿಯಾಗಿದ್ದರು ಎಂದು ಅವರು ಹೇಳಿದ್ದಾರೆ.

