ತಮಿಳುನಾಡು:ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಮೂವರು ಮೃತಪಟ್ಟಿದ್ದಾರೆ.
ಮಳೆಯಿಂದಾಗಿ ಪಟ್ಟಣ ಪ್ರದೇಶಗಳು ಜಲಾವೃತಗೊಂಡಿದ್ದು, ಚೆನ್ನೈ ಮತ್ತು ಪಕ್ಕದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ ಕಳೆದ ರಾತ್ರಿ ಮಳೆ ಸುರಿಯುತ್ತಿದ್ದಾಗ ವಿದ್ಯುತ್ ಕಂಬ ಉರುಳಿಬಿದ್ದು ವಿದ್ಯುತ್ ಸ್ಪರ್ಶದಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣೆ ಸಚಿವ ಕೆ.ಕೆ.ಎಸ್.ಎಸ್.ಆರ್. ರಾಮಚಂದ್ರನ್ ತಿಳಿಸಿದ್ದಾರೆ.
ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲೆಪಟ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲಾಗಳಲ್ಲಿ ಶಾಲಾ, ಕಾಲೇಜುಗಳು ಮತ್ತು ಅನಿವಾರ್ಯವಲ್ಲದ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದೆ.
ಸಮುದ್ರದಲ್ಲಿ ಚಂಡಮಾರುತ ಎದ್ದಿರುವುದರಿಂದ ಭಾರೀ ಮಳೆ ಬೀಳುತ್ತಿದೆ.
ರಾಜಧಾನಿ ಚೆನ್ನೈನಲ್ಲಿ 20 ಸೆಂ.ಮೀ ಮಳೆಯಾಗಿದ್ದು ಹಲವು ಪ್ರದೇಶಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥಗೊಂಡಿದೆ.
ಚೆನ್ನೈನಾಲ್ಕು ಸುರಂಗ ರಸ್ತೆ ಮಾರ್ಗಗಳನ್ನು ಮುಚ್ಚಲಾಗಿದೆ.
ಶುಕ್ರವಾರ ಕೂಡಾ ಮಳೆಯಾಗಿದೆ, ಮುಂದಿನ ಮೂರು ದಿನಗಳಲ್ಲಿ ಉತ್ತರ ಕರಾವಳಿ ತಮಿಳುನಾಡು ಮತ್ತು ದಕ್ಷಿಣ ಕರಾವಳಿ, ಆಂಧ್ರಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

