ನವದೆಹಲಿ: ಹೊಸ ವರ್ಷದ ಮೊದಲ ದಿನವನ್ನು ಅನ್ನದಾತರಿಗೆ ಸಮರ್ಪಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವರ್ಷದ ಮೊದಲ ದಿನವನ್ನು ಅನ್ನದಾತರಿಗೆ ಮೀಸಲಿಡುವುದಾಗಿ ಹೇಳಿದ್ದಾರೆ.
ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹತ್ತನೇ ಕಂತು ಹಣವನ್ನು ಶನಿವಾರ 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವರ್ಗಾಯಿಸಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

