ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕೋವಿಡ್

ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕೋವಿಡ್‌ ಪಾಸಿಟೀವ್‌ ಬಂದಿದೆ.

ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಸಚಿವರು, ಈಗ ಹೋಮ್ ಕ್ವಾರಂಟೈನ್ ಆಗಿದ್ದಾರೆ.

ಕೊರೋನಾ ಲಘು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೊವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇಂಥ ಸ್ಥಿತಿ ಇದ್ದರೂ ಶಾಲೆ-ಕಾಲೇಜುಗಳನ್ನು ಮುಚ್ಚುವುದಿಲ್ಲ ಎಂದು ಸಚಿವರು ಹೇಳಿದ್ದರು. ಈಗ ಅವರಿಗೆ ಕೋವಿಡ್ ಆಗಿದೆ ಎಂದು ಅವರು ಟ್ವೀಟ್ ಮಾಡುತ್ತಿದ್ದಂತೆ, ಈಗಲಾದರೂ ಸೋಂಕು ಹತೋಟಿಗೆ ಬರುವ ತನಕ ಶಾಲೆ-ಕಾಲೇಜು ಬಂದ್ ಮಾಡುವ ಬಗ್ಗೆ ಆಲೋಚನೆ ಮಾಡಿ ನೆಟ್ಟಿಗರು ಒತ್ತಾಯ ಮಾಡುತ್ತಿದ್ದಾರೆ.