ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ.
ಅವರೇ ಈ ಕುರಿತು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ರೋಗ ಲಕ್ಷಣ ಕಾಣಿಸಿಕೊಂಡ ತಕ್ಷಣ ಅವರಿಗೆ ವೈದ್ಯರು ಕೋವಿಡ್ ಪರೀಕ್ಷೆ ನಡೆಸಿದ್ದಾರೆ.
ಮಂಗಳವಾರ ವರದಿ ಬಂದಿದ್ದು ಸೋಂಕು ತಗುಲಿರುವುದು ಖಚಿತವಾಗಿದೆ. ಎಚ್ಚರಿಕೆ ವಹಿಸುವಂತೆ ಆರೋಗ್ಯ ಅಕಾರಿಗಳು ಸಲಹೆ ನೀಡಿದ್ದಾರೆ.
ಕೇಜ್ರಿವಾಲ್ ಆವರು ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು ಆರೋಗ್ಯದ ಬಗ್ಗೆ ಕಾಳಜಿ ನಿಗಾ ವಹಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಉತ್ತರ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಚುನಾವಣಾ ಪ್ರಚಾರದಲ್ಲಿ ಅವರು ಪಾಲ್ಗೊಂಡಿದ್ದರು.
ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ,ಎಚ್ಚರಿಕೆ ವಹಿಸಿ ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.

