ಚೆನ್ನೈ: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಮೂವರು ಸಾವನ್ನಪ್ಪಿದಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ವಿರುದುನಗರದ ಸತ್ತೂರು ಸಮೀಪದ ಮಂಜಲೋಡೈಪಟ್ಟಿಯಲ್ಲಿರುವ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ.
ಬೆಂಕಿ ಅವಘಡದಲ್ಲಿ ಏಳು ಮಂದಿ ಗಂಭೀರವಾಗಿಗಾಯಗೊಂಡಿದ್ದು ಅವರುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳ್ಳಂಬೆಳಗ್ಗೆ ಬೆಂಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಘಟನೆಯ ಕುರಿತು ಟ್ವೀಟ್ ಮಾಡಿರುವ ಜಿಲ್ಲಾ ಕಲೆಕ್ಟರ್ ಮೇಘನಾಥ್ ರೆಡ್ಡಿ, ರಕ್ಷಣಾ ಕಾರ್ಯಚರಣೆಮುಂದುವರೆದಿದೆ. ಗಾಯಗೊಂಡಿರುವ ಏಳು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

