ನವದೆಹಲಿ: ಬದುಕುಳಿದು ಬಂದಿದ್ದಕ್ಕೆ ಸಿಎಂಗೆ ಥ್ಯಾಂಕ್ಸ್ ಹೇಳಿ ಎಂದು ಪ್ರಧಾನಿ ನರೇಮದ್ರ ಪಿಎಂ ಮೋದಿ ಹೇಳಿದ್ದಾರೆ.
ಮೋದಿ ಅವರು ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಲು ತೆರಳುತ್ತಿದ್ದಾಗ 15 ರಿಂದ 20 ನಿಮಿಷಗಳ ಕಾಲ ಫ್ಲೈಓವರ್‍ನಲ್ಲಿ ಸಿಲುಕಿಕೊಂಡ ಘಟನೆ ಪಂಜಾಬ್‍ನಲ್ಲಿ ಬುಧವಾರ ನಡೆಯಿತು.
ಪಂಜಾಬ್ ನ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿ ಬಟಿಂಡಾಗೆ ಬಂದಿಳಿದಿದ್ದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಅವರು ಸ್ಥಳಕ್ಕೆ ಹೋಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಹೋಗಲಾಗಲಿಲ್ಲ.
ಹಾಗಾಗಿ ಪ್ರಧಾನಿ ಮೋದಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ರಸ್ತೆಯಲ್ಲಿ ಅಡಚಣೆ ಉಂಟು ಮಾಡಿದ್ದು ಫ್ಲೈಓವರ್ ನಲ್ಲಿ ಪ್ರಧಾನಿ ಸಿಲುಕಿಕೊಂಡರು.
ಭಟಿಂಡಾ ಏರ್‍ಪೆÇೀರ್ಟ್‍ಗೆ ಮರಳಿದ ಮೋದಿ ಅಲ್ಲಿನ ಸಿಬ್ಬಂದಿಗೆ ನಾನು ಬದುಕುಳಿದು ಬಂದಿದ್ದಕ್ಕೆ ನಿಮ್ಮ ಸಿಎಂಗೆ ಥ್ಯಾಂಕ್ಸ್ ಹೇಳಿ ಎಂದು ಹೇಳಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಕೇಂದ್ರ ಸರ್ಕಾರ ಇದನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಬಹುದೊಡ್ಡ ಭದ್ರತಾ ಲೋಪ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಕ್ಯಾ. ಅಮರಿಂದರ್ ಸಿಂಗ್ ಸೇರಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಲವಾರು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

