ಪ್ರವಾಸಿಗರಿಗೆ ಅರಮನೆ ವೀಕ್ಷಣೆಗೆ ನಿರ್ಬಂಧ

ಮೈಸೂರು:ವಾರಾಂತ್ಯದ ಕರ್ಫ್ಯೂ ಇರುವುದರಿಂದ ಮೈಸೂರು ಅರಮನೆ ವೀಕ್ಷಣೆಗೆ ಪ್ರತಿ ಶನಿವಾರ ಹಾಗೂ ಭಾನುವಾರದಂದು  ನಿರ್ಬಂಧಿಸಲಾಗಿದೆ.

ಕೋವಿಡ್-19 ಹೆಚ್ಚಳ ವನ್ನು ನಿಯಂತ್ರಿಸುವ ಸಲುವಾಗಿ ಜನವರಿ 8, 9 ಹಾಗೂ 15,16ರಂದು ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿ ಸಲಾಗಿದೆ.

ಉಳಿದ ದಿನಗಳಲ್ಲಿ ಎಂದಿನಂತೆ ಅರಮನೆಯು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ.

ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆ ದಂತಹ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕರು  ತಿಳಿದ್ದಾರೆ.