ಮೈಸೂರು:ರೂಪಾಂತರ ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಧಾರ್ಮಿಕ ದತ್ತಿ ಇಲಾಖೆಯಿಂದ ದೇಗುಲಗಳಿಗೆ ಹೊಸ ನಿಯಮ ಜಾರಿಗೊಳಿಸಲಾಗಿದೆ.
ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಸೇವೆಗಳು ಇರುವುದಿಲ್ಲ. ಒಂದು ಬಾರಿಗೆ 50 ಜನ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಇರುತ್ತದೆ.
ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಶನಿವಾರ ಹಾಗೂ ಭಾನುವಾರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ.
ಎರಡು ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ದರ್ಶನಕ್ಕೆ ಅವಕಾಶ ಇರುತ್ತದೆ,ದರ್ಶನಕ್ಕೆ ಬರುವ ಭಕ್ತಾದಿಗಳು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ

