ಬೆಂಗಳೂರು:ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಜೀವರಕ್ಷಣೆಯ ಜವಾಬ್ದಾರಿ ಹೊತ್ತಿರುವ, ಪೊಲೀಸ್ ಇಲಾಖೆ,ಇನ್ನಷ್ಟು ಜನಸ್ನೇಹಿ ಯಾಗಿ ಹೊರ ಹೊಮ್ಮಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಶಿಸಿದರು.
ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಮಹಾಮಾರಿ ಸೋಂಕು, ಅನಾವೃಷ್ಟಿಯಂಥ ಸಮಸ್ಯೆಗಳ ನಡುವೆ 2021ನೆ ವರ್ಷ ಕಳೆದು 2022 ಕ್ಕೆ ಕಾಲಿಟ್ಟಿದ್ದೇವೆ ಎಂದರು.
ನೂತನ ವರ್ಷದಲ್ಲಿ ಹೊಸ ಹೊಸ ಸವಾಲುಗಳನ್ನೂ ಎದುರಿಸಲು ಸಜ್ಜಾಗಬೇಕು ಎಂದು ಸಚಿವರು ಹೇಳಿದರು.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಯಶಸ್ವಿಯಾಗಿ ನಡೆಸಲು ಪೊಲೀಸ್ ಸಿಬ್ಬಂದಿ ಶ್ರಮಿಸಿದ್ದಾರೆ. ಕನ್ನಡ ಚಲನಚಿತ್ರ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ಸಮಯದಲ್ಲಿ ಅಚ್ಚುಕಟ್ಟಾದ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಿರೆಂದು ಸಚಿವರು ಪ್ರಶಂಸಿಸಿದರು.

