ಕನಕಪುರ: ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಕಾಮಗಾರಿ ಆರಂಭಕ್ಕೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಸುಗಮವಾಗಿ ಪ್ರಾಂಭವಾಗಿದೆ.
ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದರು.

ಆದಿಚುಂಚನಗಿರಿ ಕ್ಷೇತ್ರದ ರಾಮನಗರ ಶಾಖಾಮಠದ ಶ್ರೀ ಅನ್ನದಾನೇಶ್ವೆರಸ್ವಾಮಿಜಿ, ಕನಕಪುರ ಮರಳಗವಿ ಮಠದ ಶಿವರುದ್ರ ಸ್ವಾಮಜೀ, ದೇಗುಲಮಠದ ಶ್ರೀ ನಿರ್ವಾಣ ಸ್ವಾಮಿಜಿ, ಹಾರುಬಲೆ ಚರ್ಚ್ ನ ಪಾದ್ರಿ ಸೇರಿದಂತೆ ಅನೇಕ ಧಾರ್ಮಿಕ ನಾಯಕರು ಹಾಜರಿದ್ದರು.
ಈ ವೇಳೆ ನಗಾರಿ ಬಾರಿಸಿ, ಗಿಡಗಳಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಚಿತ್ರರಂಗದ ಉಮಾಶ್ರೀ, ದುನಿಯಾ ವಿಜಯ್, ಸಾಧುಕೋಕಿಲ ಪಾಲ್ಗೊಂಡಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ದೃವನಾರಾಯಣ್, ಶಾಸಕರಾದ ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಆರ್.ವಿ.ದೇಶಪಾಂಡೆ, ಕೆ.ಆರ್. ರಮೇಶ್ ಕುಮಾರ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಅಲ್ಲಂ ವೀರಭದ್ರಪ್ಪ, ಬಿ.ಕೆ.ಹರಿಪ್ರಸಾಸ್, ಲಕ್ಷ್ಮೀ ಹೆಬ್ಬಾಳ್ಕರ್, ರೂಪಾ ಶಶೀಧರ್, ಅಕೈ ಪದ್ಮಸಾಲಿ, ಯು.ಬಿ.ವೆಂಕಟೇಶ್, ಎಸ್.ರವಿ, ನಾಗೇಂದ್ರ, ಇ.ತುಕಾರಾಂ, ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಇದ್ದಾರೆ.
ಹಾಗೆಯೇ ರಾಜ್ಯಸಭೆ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್,
ಪ್ರಮುಖರಾದ ಟಿ.ಬಿ.ಜಯಚಂದ್ರ, ಚಲುವರಾಯಸ್ವಾಮಿ, ಎಚ್.ಸಿ.ಮಹದೇವಪ್ಪ, ಶಿವಶಂಕರರೆಡ್ಡಿ, ಕೆ.ಎಚ್.ಮುನಿಯಪ್ಪ, ಪಿ.ಟಿ.ಪರಮೇಶ್ವರ್ ನಾಯಕ್, ಪಿ.ಜಿ.ಆರ್.ಸಿಂಧ್ಯಾ, ಬಿ.ಎಲ್.ಶಂಕರ್, ಎಚ್..ಎಂ.ರೇವಣ್ಣ, ಮೋಟಮ್ಮ, ಸಚ್ಚಿನ್ ಮೀಗಾ, ಪುಷ್ಪಾ ಅಮರ್ ನಾಥ್ ಸೇರಿ ಅನೇಕರು ಭಾಗವಹಿಸಿದ್ದರು.
ಸಂಸದ ಡಿ.ಕೆ.ಸುರೇಶ್ ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿ ಯೋಜನೆ ಶುರುವಾಗಬೇಕು ಎಂದು ಆಗ್ರಹಿಸಲು ಸಂಗಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದವರೆಗೂ 156 ಕಿಲೋ ಮೀಟರ್ ಪಾದಯಾತ್ರೆ ಆರಂಭವಾಗಲಿದೆ ತಿಳಿಸಿದರು.
ಮೇಕೆದಾಟು ಜಲಾಶಯ ನಿರ್ಮಾಣದಿಂದ ಸಮದ್ರಕ್ಕೆ ಹರಿದು ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಅದಕ್ಕಾಗಿಯೇ ಈ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.
ಭಾನುವಾರ ಕಾಂಗ್ರೆಸ್ ನಾಯಕರು ಸುಮಾರು 15ರಿಂದ 20ಕಿಲೋ ಮೀಟರ್ ಪಾದಯಾತ್ರೆ ಕೈಗೊಳ್ಳಲಿದ್ದಾರೆ. ಕನಕಪುರದಿಂದ ಬೆಂಗಳೂರಿಗೆ 11 ದಿನಗಳ ಕಾಲ ಜ. 19ರವರೆಗೆ ಕೈಗೊಂಡಿರುವ ಪಾದಯಾತ್ರೆ ನಡೆಯಲಿದೆ.

