ಹಿರಿಯ ಸಾಹಿತಿ ಚಂಪಾ ವಿಧಿವಶ

ಬೆಂಗಳೂರು: ಚಂಪಾ ಎಂದೇ ಚಿರಪರಿಚಿತರಾಗಿದ್ದ, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್ ಸೋಮವಾರ  ಮುಂಜಾನೆ 6.30ರ ವೇಳೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂಪಾ ಬೆಂಗಳೂರಿನ ಕೋಣನಕುಂಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಚಂದ್ರಶೇಖರ ಪಾಟೀಲ್, ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದರು.ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಗಿದ್ದ ವೇಳೆ ನಮ್ಮ ಭಾ಼ಷೆ ಉಳಿವಿಗಾಗಿ ಸಾಕಷ್ಟು ಕೆಲಸ ಮಾಡಿದ್ದರು.

ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018 ನೇ ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ಲಭಿಸಿದೆ.

ಅವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು.

ಚಂದ್ರಶೇಖರ ಪಾಟೀಲ್ ಪುತ್ರಿ ಮೀನಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಗಾಯತ್ರಿ ಲೇಔಟ್ ನಲ್ಲಿರುವ ಮನೆಗೆ ಪಾರ್ಥಿವ ಶರೀರ ರಾವನೆ ಮಾಡಿ ನಂತರ ಬೆಂಗಳೂರಿನಲ್ಲೇ ಅಂತ್ಯಕ್ರಿಯೇ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಾಹಿತಿ ಚಂಪಾ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ, ಮಾಜಿ ಅಧ್ಯಕ್ಷ ಮನು ಬಳಿಗಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.