ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು ಪರಿಸ್ಥಿತಿ ಕೈಮೀರಿದರೆ ಲಾಕ್ ಡೌನ್ ಹಾಕಬೇಕಾಗುತ್ತದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ, ಅನಿವಾರ್ಯವಾದರೆ ಲಾಕ್ಡೌನ್ ಹಾಕಲೇಬೇಕಾಗುತ್ತದೆ ಎಂದು ತಿಳಿಸಿದರು.
ಕೊರೊನ ಪ್ರಕರಣಗಳು ಹೆಚ್ಚಾಗಲು ಕಾಂಗ್ರೆಸ್ ಪಕ್ಷದಬರೇ ಕಾರಣ,ಇದರ ಹೊಣೆ ಅವರೇ ಹೊರಬೇಕಾಗುತ್ತದೆ ಎಂದು ಇದೇ ವೇಳೆ ಹೇಳಿದರು.
ಪದೇ ಪದೆ ಪಾದಯಾತ್ರೆ ಕೈಬಿಡಿ ಎಂದು ಮನವಿ ಮಾಡಿದರೂ ಕೂಡ ಕಾಂಗ್ರೆಸ್ ನಾಯಕರು ಸಹಕರಿಸಲಿಲ್ಲ ಸಾವಿರಾರು ಜನರನ್ನು ಸೇರಿಸಿಕೊಂಡು ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪಾದಯಾತ್ರೆ ಮಾಡಿದ್ದಾರೆ ಇದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
ಕೊರೊನಾ ಸೋಂಕು ಹೆಚ್ಚಳವಾದರೂ ಕಾಂಗ್ರೆಸ್ ನಾಯಕರು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನೀರಿನ ವಿಷಯವನ್ನು ಮುಂದಿಟ್ಟುಕೊಂಡು ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರಗ ಜ್ಞಾನೇಂದ್ರ ಕಿಡಿ ಕಾರಿದರು.
ಕಾಂಗ್ರೆಸ್ ನವರು ಐದು ವರ್ಷ ಆಡಳಿತ ನಡೆಸಿದಾಗ ಮೇಕೆದಾಟು ಸಂಬಂಧ ಕೇವಕ ಡಿ ಪಿ ಆರ್ ಮಾಡಿದ್ದು ಬಿಟ್ಟರೆ ಬೇರೇನನ್ನು ಮಾಡಲಿಲ್ಲ ಈಗ ಪಾದಯಾತ್ರೆ ಹೊರಟಿದ್ದಾರೆ ಇವರ ನಾಟಕ ಜನರಿಗೆ ಅರ್ಥ ಆಗಿರುತ್ತದೆ ಎಂದು ಹೇಳಿದರು.
ಪಾದಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿ ಮುರಿದಿರುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವರು ಹೇಳಿದರು.
ಕೇವಲ 30 ಮಂದಿ ವಿರುದ್ದ ಎಫ್ ಐ ಆರ್ ದಾಖಲಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರಲ್ಲ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ನಿಜ ಸಧ್ಯಕ್ಕೆ 30 ಲೀಡರ್ ಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಇತರರ ಬಗ್ಗೆಯೂ ಪ್ರಕರಣ ದಾಖಲು ಮಾಡಬಹುದು ಎಂದು ಸಚಿವರು ಉತ್ತರಿಸಿದರು.
ಪಾದಯಾತ್ರೆ ಕೈಬಿಡುವಂತೆ ಮನವಿ ಮಾಡಿದರೂ ಕೇಳಲಿಲ್ಲ, ಮತ್ತೆ ಮುಂದುವರಿಸಿದ್ದಾರೆ.ಜನರು ಸಂಕಷ್ಟಗಳಿಗೆ ಕಾಂಗ್ರೆಸ್ ನವರು ನೇರ ಹೊಣೆ ಎಂದು ಆರಗ ಜ್ಞಾನೇಂದ್ರ ಚಾಟಿ ಬೀಸಿದರು.

