ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹೆಚ್ಚಿನ ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗುತ್ತಿರುವುದರಿಂದ ನಗರ ಮತ್ತು ಜಿಲ್ಲೆಯಲ್ಲಿ ಅಂಗನವಾಡಿಯಿಂದ 10ನೇ ತರಗತಿಯವರೆಗಿನ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.
ಒಂದರಿಂದ ಹತ್ತನೆ ತರಗತಿವರೆಗೆ ಆನ್ ಲೈನ್ ನಲ್ಲಿ ನಡೆಸಲು ಸೂಚಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಒಟ್ಟು 138 ಮಕ್ಕಳು ಸೋಂಕಿತರಾಗಿದ್ದಾರೆ. ಮಂಗಳವಾರ 562 ಮಂದಿಗೆ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,868ಕ್ಕೆ ಏರಿದೆ.

