ಮೈಸೂರು:ಮುಂದಿನ ವಾರದಿಂದ ವೀಕೆಂಡ್ ಕರ್ಫ್ಯೂ ಮಾಡಬಾರದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮಾಡಿ ಮನವಿ ಮಾಡುವುದಾಗಿ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಅವರು ಮಾತನಾಡಿದರು.
ಮೂರನೇ ಅಲೆಯ ಕೊವಿಡ್ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಹೀಗಾಗಿ ವೀಕೆಂಡ್ ಕರ್ಫ್ಯೂ ಜತೆಗೆ ನೈಟ್ ಕರ್ಫ್ಯೂ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡುತ್ತೇವೆ ಎಂದು ಹೇಳಿದರು.
ಮೈಸೂರು ಪ್ರವಾಸಿಗರ ನೆಚ್ಚಿನ ತಾಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ವೀಕೆಂಡ್ ಕರ್ಫ್ಯೂನಿಂದ ತೊಂದರೆಯಾಗುತ್ತದೆ. ನಾವು ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತೇವೆ ಎಂದು ಹೇಳಿದರು.
ಈ ವಾರವೇ ವೀಕೆಂಡ್ ಕರ್ಫ್ಯೂಗೆ ನಮ್ಮ ವಿರೋಧವಿತ್ತು. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಸಹಕರಿಸಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಅವರು ತಿಳಿಸಿದರು.

