ಬೆಂಗಳೂರು:ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ದೇವೆಗೌಡರು ಶುಕ್ರವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೌಡರು ಆರೋಗ್ಯವಾಗಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕೋವಿಡ್ ಎರಡನೆ ಅಲೆಯಲ್ಲೂ ಗೌಡರಿಗೆ ಸೋಂಕು ಕಾಣಿಸಿಕೊಂಡಿತ್ತು. ಆಗಲೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಎರಡು ಡೋಸ್ ಕೋವಿಡ್ ಲಸಿಕೆ ಕೂಡ ಗೌಡರು ಪಡೆದುಕೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ದೇವೇ ಗೌಡರು ಜೆಪಿ ಭವನದಲ್ಲಿ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿದ್ದರು.

