ಪಾದಯಾತ್ರೆ ಹತ್ತಿಕ್ಕಲೆಂದೇ ವೀಕೆಂಡ್ ಕರ್ಫ್ಯೂ ಜಾರಿಗೆ ತಂದರು -ಸಿದ್ದು ಆರೋಪ

ಹುಬ್ಬಳ್ಳಿ:ನಾವು ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನ ಹತ್ತಿಕ್ಕಲೆಂದೇ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಯಿತು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,

ಕಾಂಗ್ರೆಸ್ ಪಾದಯಾತ್ರೆಯಿಂದ ಕೋವಿಡ್ ಹರಡಿಲ್ಲ,ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಸೋಮಶೇಖರ್‌ಗೆ ಕೋವಿಡ್ ದೃಢಪಟ್ಟಿದ್ದು ನಮ್ಮ ಪಾದಯಾತ್ರೆಯಿಂದನಾ ಎಂದು ಕಾರವಾಗಿ ಪ್ರಶ್ನಿಸಿದರು.

ಮುಂದಿನ ದಿನಗಳಲ್ಲಿ ಮಹದಾಯಿ, ಕೃಷ್ಣ, ಕಲ್ಯಾಣ ಕರ್ನಾಟಕದ 371 ಜೆ ಪರವಾಗಿ ಹೋರಾಟ ನಡೆಸುತ್ತೇವೆ‌,ಮಹದಾಯಿ ಪಾದಯಾತ್ರೆ ಬಗ್ಗೆ ಈಗಾಗಲೇ ಪಕ್ಷದಲ್ಲಿ ಚರ್ಚೆ ನಡೆದಿದೆ ಎಂದು ಮಾಹಿತಿ ನೀಡಿದರು.

ನಮ್ಮ ಅಧಿಕಾರದ ಸಂಧರ್ಬದಲ್ಲಿ ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಹೋರಾಟ ಮಾಡಿದ್ದರು.ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮಹದಾಯಿ ಯೋಜನೆ ಜಾರಿಗೆ ತರುತ್ತೇವೆ‌ ಇದನ್ನು ರಕ್ತದಲ್ಲಿ ಬರೆದು ಕೊಡುತ್ತೇನೆಂದು ಅವರು ಮಾತು ಕೊಟ್ಟಿದ್ದರು ಎಂದು ಸಿದ್ದು ಹೇಳಿದರು.

ಈಗ ಉತ್ತರ ಕರ್ನಾಟಕ ಭಾಗದ ಜನರಿಗೆ ನೀರು ಬಂತಾ ಎಂದು ಯಡಿಯೂರಪ್ಪನವರಿಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.