ಪಕ್ಷಕ್ಕಾಗಿ ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ – ಗೋಪಾಲಯ್ಯ

ಬೆಂಗಳೂರು:ಪಕ್ಷಕ್ಕಾಗಿ ನಾವು  ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇವೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಮತ್ತು ಪಕ್ಷ ನನಗೆ ಹಾಸನ ಜಿಲ್ಲೆಯ ಜೊತೆಗೆ ಮಂಡ್ಯ ಜಿಲ್ಲೆಯ ಉಸ್ತುವಾರಿಯನ್ನು ಕೊಟ್ಟಿದ್ದಾರೆ ಎಂದು ಹೇಳಿದರು.

ಅವರು ಕೊಟ್ಟಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಪಕ್ಷಕ್ಕೆ ಒಳ್ಳೆಯ ಹೆಸರನ್ನು ತರುವಂತೆ ಮಾಡುತ್ತೇನೆ, ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು  ಉಳಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಬಿಜೆಪಿಗೆ ಬಂದ ಮೇಲೆ ನನಗೆ ಟಿಕೇಟ್ ಕೊಟ್ಟಿದೆ, ಸಚಿವ ಸ್ಥಾನ ಕೊಟ್ಟಿದೆ. ಆದ್ದರಿಂದ ನಮ್ಮ ಆತ್ಮಸಾಕ್ಷಿಯಾಗಿ ನಾವು ಕೆಲಸ ಮಾಡುತ್ತೇವೆ, ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರದ ಮೇಲೆಯೇ ನಡೆಯುತ್ತೇವೆ ಎಂದು ತಿಳಿಸಿದರು.