ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿನ ಅವ್ಯವಹಾರ ತನಿಖೆಗೆ ಆದೇಶ – ಆರಗ

ಶಿವಮೊಗ್ಗ:ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ ಅವ್ಯವಹಾರಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ  ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತಂತೆ ವರದಿ ಸಲ್ಲಿಕೆಯಾದ ನಂತರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಕಾರಾಗೃಹಗಳು ಅಪರಾಧ ಕೃತ್ಯ ನಡೆಸುವ ಕೇಂದ್ರ ಸ್ಥಾನಗಳು ಆಗಬಾರದು ಎಂಬುದು ಸರ್ಕಾರದ ಉದೇಶ.ಹಾಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಾನು ಈ ಹಿಂದೆ ಕಾರಾಗೃಹಕ್ಕೂ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿ ಹಾಗೂ ಕೈದಿಗಳ ಜೊತೆಗೂ ಸಂವಾದ ನಡೆಸಿದ್ದೆ. ಅಲ್ಲಿನ  ಪರಿಸ್ಥಿತಿಯ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಪಡೆಯುತ್ತೇನೆ‌  ಎಂದು ಆರಗ ಜ್ಞಾನೇಂದ್ರ ಹೇಳಿದರು.