ಶಾಲೆಗಳ ಪುನಾರಂಭಕ್ಕೆ ಚಿಂತನೆ -ನಾಗೇಶ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು  ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತು  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿ ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆ ತೆರೆಯಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.

1ರಿಂದ 9ನೇ ತರಗತಿ ತೆರಯಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಬೆಂಗಳೂರಿನಲ್ಲಿ ಶಾಲೆ ಓಪನ್ ಬಗ್ಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಶಾಲೆ ಆರಂಭ ಕುರಿತು  ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಿದ್ದರೆ ಅಲ್ಲಿ ಮಾತ್ರ ಶಾಲೆ ಬಂದ್ ಮಾಡಲಾಗುತ್ತಿದೆ ಎಂದು ಹೇಳಿದರು.