ಬೆಳಗಾವಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಂಪರ್ಕದಲ್ಲಿ ಬಿಜೆಪಿಯಲ್ಲಿ ಸೋತ ಕೆಲವರು ಸಂಪರ್ಕದಲ್ಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಲಕನ್ ಜಾರಕಿಹೊಳಿ ಹೇಳಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಉಪ ಮುಖ್ಯ ಮಂತ್ರಿ ಲಕ್ಷ್ಮಣ ಸವದಿ ಅವರು ಡಿ.ಕೆ.ಶಿವಕುಮಾರ್ ಅವರೊಂದಿಗೆ ಬೇರೆ ಸಂಖ್ಯೆಯಿಂದ ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಸೋತ ಕೆಲವರು ಸಂಪರ್ಕದಲ್ಲಿದ್ದಾರೆ. ಇದು ನಿಜ ಆ ಪಕ್ಷದ ನಾಯಕರು ಅಂತವರ ಮೇಲೆ ಕ್ರಮ ತೆಗೆದು ಕೊಳ್ಳಬೇಕಿದೆ ಎಂದು ತಿಳಿಸಿದರು.
ನಮ್ಮ ಸಹೋದರ ರಮೇಶ್ ಜಾರಕಿ ಹೊಳಿ ಮೇಲೆ ಷಡ್ಯಂತ್ರ ಮಾಡಿ ಆರೋಪ ಹೊರಿಸಲಾಯಿತು. ಈಗ ಅವರಿಗೆ ಸಚಿವ ಸ್ಥಾನ ಕೊಟ್ಟರೆ ಮುಂದೆ ಬಿಜೆಪಿಗೆ ಒಳಿತಾಗಲಿದೆ ಎಂದು ಹೇಳಿದರು.
ಮುಂದಿನ ಚುನಾವಣೆಯಲ್ಲಿ ರಮೇಶ್ ಜಾರಕಿ ಹೊಳಿ ಅವರು 25 ಮಂದಿಯನ್ನು ಗೆಲ್ಲಿಸಿಕೊಂಡು ಬರಲಿದ್ದಾರೆ,ಅವರಿಗೆ ಆ ಶಕ್ತಿ ಇದೆ ಇದಕ್ಕೆ ಬಿಜೆಪಿ ಕೇಂದ್ರ ನಾಯಕರು ಮನಸು ಮಾಡಬೇಕು ಎಂದು ಲಕನ್ ಜಾರಕಿಹೊಳಿ ತಿಳಿಸಿದರು.

