ಮೈಸೂರು: ವೀರ ಸಾವರ್ಕರ್ ಯುವ ಬಳಗದ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 123ನೇ ಜಯಂತಿಯನ್ನು ಆಚರಿಸಲಾಯಿತು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ವೃತ್ತದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅವರನ್ನು ಸ್ಮರಿಸಲಾಯಿತು. ಆ ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.
ಈ ವೇಳೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮಾತನಾಡಿ ಫೀಲ್ಡ್ ಮಾರ್ಷಲ್ ಕಾರಿಯಪ್ಪನವರು ಕರ್ನಾಟಕದ ಹೆಮ್ಮೆ, ಕೊಡಗಿನ ಸುಪುತ್ರ. ಮೊದಲನೇ ದಂಡನಾಯಕನ ಕೊಡುಗೆಯನ್ನು ಇಂದಿನ ಪೀಳಿಗೆ ಕೂಡಾ ನೆನೆಯುತ್ತಿರುವುದು ಸಂತೋಷದ ವಿಚಾರ ಎಂದು ತಿಳಿಸಿದರು.
ರಾಷ್ಟ್ರಪತಿಗಳಿಂದ ಕೆ.ಎಂ.ಕಾರಿಯಪ್ಪನವರ ವಸ್ತು ಸಂಗ್ರಹಾಲಯ ಉದ್ಘಾಟನೆಯಾಗಿ ಜನರಿಗೆ ಮುಕ್ತವಾಗುತ್ತಿರುವುದು ಬಹಳ ಸಂತೋಷದ ವಿಚಾರ ಮತ್ತು ಅವರಿಗೆ ಸಲ್ಲುತ್ತಿರುವ ದೊಡ್ಡ ಗೌರವವಾಗಿದೆ ಎಂದು ಹೇಳಿದರು.
ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ ಕಾರಿಯಪ್ಪನವರ ಜಯಂತಿಯನ್ನು ಸರ್ಕಾರದ ವತಿಯಿಂದ ಪ್ರತಿ ವರ್ಷ ಆಚರಿಸುವಂತಾಗಬೇಕು, ಆಗ ಮತ್ತಷ್ಟು ಜನರು ಅವರನ್ನು ಸ್ಮರಿಸಿ ಗೌರವಿಸಲು ಸಾಧ್ಯವಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.
ವೀರ ಸಾವರ್ಕರ್ ಯುವ ಬಳಗದ ಅಧ್ಯಕ್ಷರಾದ ರಾಕೇಶ್ ಭಟ್, ಬಿಜೆಪಿ ಮುಖಂಡರಾದ ಮಹೇಶ್ ರಾಜ್ ಅರಸ್, ವಿಕ್ರಂ ಅಯ್ಯಂಗಾರ್ , ಅಜಯ್ ಶಾಸ್ತ್ರಿ, ರಂಗನಾಥ್, ಎಸ್ ಎನ್ ರಾಜೇಶ್ , ತಡೆ ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಸಚಿನ್ , ನವೀನ್ ಚಕ್ರಪಾಣಿ, ಶ್ರೀಕಾಂತ್ ಕಶ್ಯಪ್ , ಪ್ರಶಾಂತ್ , ಉಮೇಶ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

