ದೇಶದ ಎಲ್ಲಾ ಅಂಚೆ ಕಚೇರಿಗಳಿಗೂ ಬ್ಯಾಂಕ್ ಸ್ವರೂಪ – ಬಜೆಟ್ ನಲ್ಲಿ ಘೋಷಣೆ

ನವದೆಹಲಿ: ಅಂಚೆ ಇಲಾಖೆಗೆ ಮರು ಜೀವ ನೀಡಲು ಕೇಂದ್ರ ಸರ್ಕಾರ ಯೋಜನೆ ಸಿದ್ದಪಡಿಸಿದ್ದು,ದೇಶದಲ್ಲಿರುವ ಎಲ್ಲಾ ಅಂಚೆ ಕಚೇರಿಗಳಿಗೂ ಬ್ಯಾಂಕ್ ಸ್ವರೂಪ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದಾರೆ.

ದೇಶದಲ್ಲಿರುವ ಒಂದೂವರೆ ಲಕ್ಷ ಅಂಚೆ ಕಚೇರಿಗಳನ್ನು ಬ್ಯಾಂಕ್‍ಗಳನ್ನಾಗಿ ಪರಿವರ್ತಿಸುವ ಮೂಲಕ ಅಂಚೆ ಇಲಾಖೆಯನ್ನು ಬಲವರ್ಧನೆಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇದರ ಜತೆಗೆ 75 ಡಿಜಿಟಲ್ ಬ್ಯಾಂಕ್‍ಗಳನ್ನು ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದ್ದು, ದೇಶದ ಪ್ರಮುಖ 75 ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕ್‍ಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.