ಎನ್ ಟಿ ಎಂ ಎಸ್ ಶಾಲೆ ಸ್ಥಳಾಂತರ ಖಂಡಿಸಿ ಪ್ರತಿಭಟನೆ: ಮಾಜಿ ಶಾಸಕ ಬಂಧನ

ಮೈಸೂರು: ಮೈಸೂರಿನಲ್ಲಿ ಎನ್ ಟಿ‌ ಎಂ ಎಸ್ ಶಾಲೆ ಸ್ಥಳಾಂತರ ಮಾಡಿದ್ದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಮಾಜಿ ಶಾಸಕ ಎಂ. ಕೆ. ಸೋಮಶೇಖರ್ ಮತ್ತಿತರ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಎನ್ ಟಿ ಎಂ ಎಸ್ ಶಾಲೆ ಉಳಿಸಿ ಹೋರಾಟ ಸಮಿತಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಎಂ. ಕೆ. ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಾಲೆ ಮುಂಭಾಗದ ರಸ್ತೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು,  ಪ್ರಥಮ ಕನ್ನಡ  ಶಾಲೆ ಉಳಿಯಲಿ ಎಂದು ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರು, ಸ್ಥಳೀಯ ರೈತ ಮುಖಂಡರು, ಮತ್ತಿತರರು ಭಾಗಿಯಾಗಿದ್ದರು.

ಪ್ರತಿಭಟನೆ ನಡೆಸುತ್ತಿದ್ದ ಎಂ. ಕೆ. ಸೋಮಶೇಖರ್ ಹಾಗೂ ಕೆಲ ಹೋರಾಟಗಾರರನ್ನ ಪೊಲೀಸರು ಬಂಧಿಸಿ ನಂತರ ಶಾಂತಿಯುತ ಹೋರಾಟಕ್ಕೆ ಅನುವು ಮಾಡಿಕೊಟ್ಟರು.