ಮೈಸೂರು: ಈ ದೇಶ ನಿಮ್ಮ ತಾತನದ್ದಾ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಪ್ರತಾಪ್ ಸಿಂಹ ಮಾತನಾಡಿ, ತನ್ವೀರ್ ಸೇಠ್ ಅವರ ಪೂರ್ವಜರು ಮೆಕ್ಕಾ, ಮದೀನಾದಿಂದ ಬಂದವರಲ್ಲ,ಇಲ್ಲೇ ಹುಟ್ಟಿ, ಇಲ್ಲೇ ಬೆಳೆದು ಮತಾಂತರಗೊಂಡವರು. ಇದೆಲ್ಲವನ್ನೂ ತನ್ವೀರ್ ಸೇಠ್ ಅರ್ಥ ಮಾಡಿಕೊಂಡು ಮಾತನಾಡಬೇಕು ಎಂದು ಹೇಳಿದರು.
ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರಹಾಗೂ ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರದ ಆದೇಶವನ್ನು ಎಲ್ಲ ವಿದ್ಯಾರ್ಥಿಗಳು ಪಾಲನೆ ಮಾಡಬೇಕು ಎಂದು ಹೇಳಿದರು.

