ವಿದ್ಯಾರ್ಥಿಗಳು ಸರ್ಕಾರದ ನಿಯಮಗಳನ್ನು ಪಾಲಿಸಬೇಕು -ಬೊಮ್ಮಾಯಿ

ನವದೆಹಲಿ:ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ ‌ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಸಿಎಂ, ವಾರ್ಷಿಕ ಪರೀಕ್ಷೆ ಹತ್ತಿರವಿರುವಿದೆ ಈ‌ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಸಂಘರ್ಷ ಇರಬಾರದು ಎಂದು ತಿಳಿಸಿದರು.

ಮಂಗಳವಾರ ಹೈಕೋರ್ಟ್ ನಲ್ಲಿ ಹಿಜಬ್ ಕುರಿತು ವಿಚಾರಣೆ ಇದೆ,ನ್ಯಾಯಾಲಯದ ಆದೇಶ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ದಯವಿಟ್ಟು ಎಲ್ಲರೂ ಶಾಂತಿ ಕಾಪಾಡಬೇಕೆಂದು ಬೊಮ್ಮಾಯಿ ಮನವಿ ಮಾಡಿದರು.

ನಾನು ಮುಖ್ಯ ಮಂತ್ರಿ ಆದಮೇಲೆ ಕೋಮುವಾದ ಹೆಚ್ಚಾಗಿಲ್ಲ ಎಂದು ಇದೇ ವೇಳೆ ಸಿಎಂ ಸಮರ್ಥಿಸಿಕೊಂಡರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲು ಸಮಯ ಕೇಳಿದ್ದೇನೆ ಅವರು ಸಮಯ ನೀಡಿದರೆ ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

ದೆಹಲಿಯಲ್ಲಿ ನಮ್ಮ ರಾಜ್ಯದ ಸಂದರ ಸಭೆ ಕರದಿದ್ದೇನೆ ಸಭೆಯಲ್ಲಿ ರಾಜ್ಯಕ್ಕೆ ಸಂಬಂಧ ಪಟ್ಟ ಯೋಜನೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.