ಬೆಂಗಳೂರು: ಹಿಜಬ್ ಮತ್ತು ಕೇಸರಿ ವಿವಾದ ತಾರಕಕ್ಕೇರಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈಸ್ಕೂಲು ಮತ್ತು ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ವಿವಿಧೆಡೆ ಹಿಜಬ್ ಮತ್ತು ಕೇಸರಿ ನಡುವೆ ಸಂಘರ್ಷ ಹೆಚ್ಚಾಗುತ್ತಲೇ ಇದೆ.
ಅದರಲ್ಲೂ ಮಂಗಳವಾರ ದಾವಣಗೆರೆ ಜಿಲ್ಲೆ ಹರಿಹರದ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಿತು.
ಪರಿಸ್ಥಿತಿ ತಹಬದಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿ ಅಶೃವಾಯು ಸಿಡಿಸಬೇಕಾಯಿತು.
ರಾಜ್ಯದೆಲ್ಲೆಡೆ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಇತ್ತ ಹೈಕೋರ್ಟ್ ತೀರ್ಪನ್ನು ಎದುರು ನೋಡುತ್ತಿದ್ದ ಸರ್ಕಾರ ಯಾವಾಗ ಕೋರ್ಟ್ ವಿಚಾರಣೆಯನ್ನು ಬುಧವಾರ ಮಧ್ಯಾಹ್ನಕ್ಕೆ ಮುಂದೂಡಿತೋ ತಕ್ಷಣ ಎಚ್ಚತ್ತುಕೊಂಡಿದೆ.
ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ಮೂರುದಿನ ರಜೆ ಘೋಷಿಸಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

