ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಮಂಜಮ್ಮ ಜೋಗತಿ ಕರೆ

ಮೈಸೂರು: ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನು ಉಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು  ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ ಜನಸಾಮನ್ಯರಿಗೆ ಕರೆ ಕೊಟ್ಟಿದ್ದಾರೆ.

ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ 2 ತಿಂಗಳ ಕಾಲ ಮೂಕ ಸ್ಪಂದನೆ ಎಂಬ ನೀರುಣಿಸಿ-ಜೀವವನ್ನುಳಿಸಿ ಅಭಿಯಾನವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ

ಈ ಅಭಿಯಾನಕ್ಕೆ ಬೆಂಗಳೂರಿನ  ರವೀಂದ್ರ ಕಲಾಕ್ಷೇತ್ರದ ಕನ್ನಡಭವನದಲ್ಲಿ ಮಾತಾ ಮಂಜಮ್ಮ ಜೋಗತಿ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಚಾಲನೆ ನೀಡಿದರು.

ಈ ವೇಳೆ ಮಂಜಮ್ಮ ಜೋಗತಿ ಅವರು ಮಾತನಾಡಿ ಬೇಸಿಗೆಯ ತಾಪಮಾನದ ತೀವ್ರತೆಯಿಂದಾಗಿ ಪ್ರಾಣಿ ಪಕ್ಷಿ ಸಂಕುಲ ಬಳಲುತ್ತವೆ. ಕುಡಿಯುವ ನೀರು ಆಹಾರಕ್ಕಾಗಿ ಪರಿತಪಿಸುತ್ತವೆ ಎಂದು ಹೇಳಿದರು.

ಇದನ್ನು ಮನಗೊಂಡು ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್

2ತಿಂಗಳ ಕಾಲ ಮೂಕ ಸ್ಪಂದನೆ ಎಂಬ ನೀರುಣಿಸಿ-ಜೀವವನ್ನುಳಿಸಿ ಅಭಿಯೋಜನೆಯನ್ನು ಮೈಸೂರು ನಗರದ ಸುತ್ತಮುತ್ತ ಪ್ರದೇಶಗಳಲ್ಲಿ  ರೂಪಿಸುತ್ತಿರುವುದು ಅತ್ಯುತ್ತಮವಾದ ಕೆಲಸ,   ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೇಸಿಗೆ ಬಿಸಿಲು  ಆರಂಭಗೊಂಡಿದ್ದು ಪ್ರಾಣಿ ಪಕ್ಷಿಗಳು ತಮ್ಮ ಅಸ್ಥಿತ್ವಕ್ಕಾಗಿ ಹೋರಾಟ ನಡೆಸುವ ಹಾದಿಯಲ್ಲಿರುತ್ತವೆ.

ಜನವಸತಿ ಮತ್ತು ಜನಸಂಖ್ಯೆಗನುಗುಣವಾಗಿ ಮೊಬೈಲ್ ಮತ್ತು ಇತರೆ ತರಂಗದಿಂದಾಗಿ ಹಲವಾರು ಪಕ್ಷಿಗಳು ನಶಿಸಿವೆ.

ಜನತೆಯ ಮಧ್ಯೆಯೇ ಬದುಕಿ ಬೆರೆತು ಜೀವಿಸುವ ಪ್ರಾಣಿಪಕ್ಷಿ ಸಂಕುಲ ಆಹಾರ ಮತ್ತು ಕುಡಿಯಲು ನೀರಿಗಾಗಿಪರಿತಪಿಸುವ ಸ್ಥಿತಿ ಇದೆ ಎಂದು ವಿಷಾದ ವ್ಯಕ್ತಪಡಿಸಿದರು.

ಮಾನವೀಯ ದೃಷ್ಟಿಯಿಂದ ಅವುಗಳ ಬಗ್ಗೆ ಕಾಳಜಿವಹಿಸಬೇಕೆಂದು ಮಂಜಮ್ಮ ಜೋಗತಿ ಕಳಕಳಿ ವ್ಯಕ್ತಪಡಿಸಿದರು.

ಸಮಾಜಮುಖಿ ಟ್ರಸ್ಟ್ ನ ಈ ಸೇವಾ ಕಾರ್ಯ ನಿಜಕ್ಕೂ ಶ್ಲಾಘನೀಯ ಇವರ ಈ ಕೆಲಸ ಯಶಸ್ವಿಗೊಳ್ಳಲಿ ಸಾರ್ವಜನಿಕರು ಸೇವಾ ಕಾರ್ಯಕ್ಕೆ ಕೈ ಜೋಡಿಸಲಿ ಎಂದು ಹೇಳಿದರು

ನಂತರ ಮಾತನಾಡಿದ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ನಮ್ಮ ಈ ಅಭಿಯಾನಕ್ಕೆ ಸಾರ್ವಜನಿಕರು ಸಹ ಕೈ ಜೋಡಿಸಬಹುದು ಎಂದು ಹೇಳಿದರು.

ಮೈಸೂರು ನಗರದ ಪ್ರತಿ ವಾರ್ಡ್‌ ನಲ್ಲಿ  ನೀರಿನ ತೊಟ್ಟಿ ಹಾಗೂ ಮರಗಳಿಗೆ ನೀರಿನ ತಟ್ಟೆ ಹಾಗೂ ಆಹಾರದ ತಟ್ಟೆ ನೆಡಲಾಗುವುದು ಎಂದು ತಿಳಿಸಿದರು.

ನಮ್ಮ ಅಭಿಯಾನಕ್ಕೆ ಕೈ ಜೋಡಿಸುವವರು ಮೊಬೈಲ್  9880752727 /  8105078070 ಸಂಪರ್ಕಿಸಬಹುದು ಎಂದು ಹೇಳಿದರು.

ಮನವಿ: ಎಲ್ಲರೂ ಅವರವರ ಮನೆಗಳ ಮೇಲಿನ ತಾರಸಿಯ ಮೇಲೆ, ಮರಗಳ ಕೆಳಗೆ, ಮನೆಯ ಮುಂದಿನ ರಸ್ತೆಯ ಇಕ್ಕೆಲಗಳಲ್ಲಿ ಪ್ರಾಣಿ ಪಕ್ಷಿಗಳ ಬಾಯಿಗೆ ಎಟುಕುವಂತೆ ಮಣ್ಣಿನ ಬಟ್ಟಲು ಅಥವಾ ಸಣ್ಣ ಸಿಮೆಂಟ್ ತೊಟ್ಟಿಗಳನ್ನಿಟ್ಟು ಅದರಲ್ಲಿ ಶುದ್ಧ ನೀರನ್ನು ತುಂಬಿಡಬೇಕು. ಆಹಾರ ಧಾನ್ಯ ಮಿತವಾಗಿಟ್ಟು ಅವುಗಳನ್ನು ಸಲುಹಬೇಕು  ಎಂದು ಸಲಹೆ ನೀಡಿದರು.

ಕೆಎಂಪಿಕೆ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಅಜಯ್ ಶಾಸ್ತ್ರಿ , ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ರೇಖಾ ಶ್ರೀನಿವಾಸ್, ಮಂಜುನಾಥ್, ರುದ್ರಾಕ್ಷಿ ಬಾಯಿ, ರೂಪ ಹೆಚ್. ಗೌಡ, ಕವಿತಾ ಮಠದ್, ಹೇಮಲತಾ, ರೇಣುಕಾ, ಜಾನಪದ ಅಕಾಡೆಮಿ ಸದಸ್ಯರುಗಳಾದ  ಶ್ರೀವತ್ಸ, ಜಿ. ಆರ್. ನಾರಾಯಣಪ್ಪ ಮಡ ಸಿರಿವಾರ ,ರುದ್ರಾಕ್ಷಿ ಬಾಯ್ , ಕುಡಿಯರ ಬೋಜಕ್ಕಿ  ಇನ್ನಿತರರು ಹಾಜರಿದ್ದರು.