ಹರ್ಷನನ್ನು ಮುಸ್ಲಿಮರೇ ಕೊಂದಿರುವುದು ಸಾಭೀತಾಗಿದೆ; ಹರಿಪ್ರಸಾದ್ ನನ್ನ ಮಾತು ಒಪ್ಪಲಿ -ಈಶ್ವರಪ್ಪ

ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನನ್ನು ಮುಸ್ಲಿಮರೇ ಹೊಡೆದಿರುವುದು ಸಾಭೀತಾಗಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಈಗಲಾದರೂ ನನ್ನ ಮಾತನ್ನು ಒಪ್ಪಿಕೊಳ್ಳಲಿ ಎಂದು ತಿಳಿಸಿದರು.

ಹರ್ಷನನ್ನು ಕೊಲೆ ಮಾಡಿರುವವರು ಮುಸ್ಲಿಂ ಗೂಂಡಾಗಳೇ ಎಂದು ನಾನು ಹೇಳಿದ್ದೆ. ನಾನು ನಿನ್ನೆ ಎಸ್‍ ಪಿ ಬಳಿ ಮಾಹಿತಿ ಪಡೆದು ಹೇಳಿಕೆ ಕೊಟ್ಟಿದ್ದೆ. ಅರೆಸ್ಟ್ ಆಗಿರೋರು ಎಲ್ಲರೂ ಮುಸ್ಲಿಮರೇ ಆಗಿದ್ದಾರೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಈಗಾಗಲೇ ಹಲವರ ಬಂಧನ ಆಗಿದೆ, ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಗಿತ್ತು. ಗೋಹತ್ಯೆ ತಡೆಗೆ ಮುಂದಾದವರನ್ನ ಕೊಲೆ ಮಾಡಲಾಗಿತ್ತು. ಈಗ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಗ್ಗೊಲೆ ಆಗುತ್ತಿದೆ. ಉದ್ದೇಶ ಪೂರ್ವಕವಾಗಿ ಇಂತಹ ಕೊಲೆ ಆಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿಯೂ ಈ ಕುರಿತು ಎನ್‍ ಐಎ ತನಿಖೆಗೆ ಮನವಿ ಮಾಡುತ್ತೇನೆ. ತನಿಖೆಯಿಂದ ಯಾರು ಇದರ ಹಿಂದೆ ಇದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಈಶ್ವರಪ್ಪ ಹೇಳಿದರು.