ಹರ್ಷ ಕೊಲೆ ಹಿಂದೆ ಅನೇಕ ಸಂಘಟನೆಗಳ ಕೈವಾಡವಿರುವ ಶಂಕೆ -ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಶಿವಮೊಗ್ಗ ಭಜರಂಗದಳದ ಕಾರ್ಯ ಕರ್ತ ಹರ್ಷ ಕೊಲೆ ಹಿಂದೆ ಅನೇಕ ಸಂಘಟನೆಗಳ ಕೈವಾಡವಿರುವ ಶಂಕೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬಂಧಕ್ಕೊಳಗಾಗಿರುವ ಆರೋಪಿಗಳಿಗೆ ಯಾರ ಸಂಪರ್ಕವಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಗೃಹ ಸಚಿವರು ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಬಂಧನದಲ್ಲಿರುವ ಆರೋಪಿಗಳಿಗೆ ಯಾರ ಜೊತೆ ಸಂಪರ್ಕವಿದೆ? ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದವರು ಹೇಳಿದರು.

ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೆÇಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವರು ಹೇಳಿದರು.

ಬಂಧಿತರ ಮೇಲೆ ಅನೇಕ ಕೇಸ್ ಗಳಿವೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದರು.

ಅನೇಕ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆದರಿಕೆ ಬಂದ ಕೂಡಲೇ ಪೆÇಲೀಸರಿಗೆ ದೂರು ಕೊಡಿ, ಭದ್ರತೆ ಕೊಡುತ್ತೇವೆ ಎಂದು ಗೃಹ ಸಚಿವರು ತಿಳಿಸಿದರು.

ಕೋಟೆ ಮತ್ತೆ ದೊಡ್ಡಪೇಟೆ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧವೂ ತನಿಖೆಯಾಗುತ್ತಿದೆ. 5 ವರ್ಷ ಸಂಪೂರ್ಣ ತನಿಖೆಗೆ ಸೂಚನೆ ನೀಡಲಾಗಿದೆ. ಕ್ರೈಂ ಆಡಿಟ್ ಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದರು.
ಈ ಸಂಬಂಧ ಡಿಜಿ ಅವರಿಗೂ ತನಿಖೆ ನಡೆಸುವಂತೆ ಪತ್ರ ಬರೆದಿದ್ದೇನೆ. ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದು, ಒಂದು ವೇಳೆ ಪೆÇಲೀಸರು ಲೋಪವೆಸಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ಎಸ್ ಡಿಪಿಐ ಮತ್ತು ಪಿಎಫ್‍ಐ ಸಂಘಟನೆ ಬ್ಯಾನ್ ವಿಚಾರವಾಗಿ ಮಾತನಾಡಿದ ಅವರು, ಶಾಸಕರು ಹಾದಿಯಾಗಿ ಎಲ್ಲರೂ ಇದನ್ನು ನಿಷೇಧಿಸುವಂತೆ ಒತ್ತಾಯ ಮಾಡಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.