ಬೆಂಗಳೂರು: ತರಗತಿಗೆ ಹಾಜರಾಗುವ ಮುನ್ನ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ಸ್ಥಳ ಕಲ್ಪಿಸುವಂತೆ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ಉಡುಪಿಯಲ್ಲಿ ಆರಂಭವಾದ ಹಿಜಾಬ್-ಕೇಸರಿ ಶಾಲು ಕಿಡಿ ದೇಶಾದ್ಯಂತ ಹಬ್ಬಿ ಸದ್ಯ ಕೋರ್ಟ್ ಅಂಗಳದಲ್ಲಿ ವಾದ ಮಂಡನೆ ನಡೆಯುತ್ತಿದೆ.
ಇತ್ತ ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿ ಪ್ರವೇಶಿಸದಂತೆ ಸರ್ಕಾರ ಸೂಚಿಸಿದೆ.
ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ಕರ್ನಾಟಕದಲ್ಲಿನ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಫೆ.10ರಂದು ಮಧ್ಯಂತರ ಆದೇಶ ನೀಡಿತ್ತು. ಈ ಆದೇಶದಲ್ಲಿ ಶಾಲೆ, ಕಾಲೇಜುಗಳನ್ನು ಮುಚ್ಚುವುದು ಬೇಡ. ತಕ್ಷಣವಾಗಿ ಶಾಲೆ ಕಾಲೇಜು ಆರಂಭಿಸಿ ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.
ಹೈಕೋರ್ಟ್ ಮಧ್ಯಂತರ ಆದೇಶದನ್ವಯ ಹಿಜಾಬ್ ಧರಿಸಿ ಶಾಲಾ ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿದಂತೆ ಸೂಚಿಸಿರುವ ಹಿನ್ನೆಲೆಯಲ್ಲಿ, ಹಿಜಾಬ್ ತೆಗೆದು ತರಗತಿಗೆ ಆಗಮಿಸಲು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ / ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.

