ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಕರೆ ತರುವ ಯತ್ನ ನಡೆದಿದೆ-ಸಿಎಂ

ಬೆಂಗಳೂರು: ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿಗಳು ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 100 ಭಾರತೀಯರ ಪೈಕಿ ರಾಜ್ಯದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರತೆರುವ ಪ್ರಯತ್ನಗಳು ನಡೆಯುತ್ತಿದೆ ಎಂದು ಅವರು ಹೇಳಿದರು.

ಈ ಬಗ್ಗೆ ಕೇಂದ್ರ ಸರ್ಕಾರ, ವಿದೇಶಾಂಗ ಕಾರ್ಯದರ್ಶಿ ಹಾಗೂ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಜತೆಗೆ ಸಂಪರ್ಕ ಸಾಧಿಸಿದ್ದು, ವಿದೇಶಾಂಗ ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ 50 ವಿದ್ಯಾರ್ಥಿಗಳು ಸೇರಿದಂತೆ 100 ಕ್ಕೂ ಭಾರತೀಯರ ಜತೆಗೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಕಚೇರಿ ಹಾಗೂ ಯುಕ್ರೇನ್ ನಲ್ಲಿರುವ ಭಾರತೀಯ ಕಚೇರಿ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಜತೆಗೆ ಸಿಲುಕಿಕೊಂಡವರ ಕೂಡ ಭಾರತೀಯ ದೂತವಾಸ ಕಚೇರಿ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಸುರಕ್ಷಿತ ಸ್ಥಳದ ಕುರಿತು ಅಲ್ಲಿನ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುತ್ತಿದ್ದಾರೆ. ರಾಜ್ಯ ಸರ್ಕಾರವೂ ನಿರಂತರ ಸಂಪರ್ಕದಲ್ಲಿದೆ. ಎಂದು ತಿಳಿಸಿದರು.