ಬೆಂಗಳೂರು: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಿ ಅಭಿವೃದ್ಧಿ ಕಾಮಗಾರಿಗಳ ವಿವೇಚನೆಯನ್ನ ದೇವಾಲಯಗಳಿಗೆ ಕೊಡಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ
2022-23ನೇ ಸಾಲಿನ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಸಿಎಂ, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಿಗೊಳಿಸಬೇಕೆಂಬ
ಭಕ್ತಾಗಳ ಬೇಡಿಯನ್ನು ಪರಿಗಣಿಸಿ ಧಾರ್ಮಿಕ ಇಲಾಖೆ ದತ್ತಿ ವ್ಯಾಪ್ತಿಯ ಸ್ವಾಯತ್ತತೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಈ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳ ಅರ್ಚಕರ ಆಗಮಿಕರ ನೌಕರರಿಗೆ ನೆರವಾಗಲು ತಸ್ತಿಕ್ ಮೊತ್ತವನ್ನು 48 ಸಾವಿರ ರೂ.ಗಳಿಂದ 60 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ದೇವಾಲಯಗಳ ಸೇವೆಗಳನ್ನು ಭಕ್ತಾಗಳಿಗೆ ಆನ್ಲೈನ್ ಮುಖಾಂತರ ಕೊಡಲು ತಂತ್ರಾಂಶವನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

