ಮೇಕೆದಾಟು ವಿಷಯ ಕೇಂದ್ರ ಸಚಿವರ ಹೇಳಿಕೆ ಹಾಸ್ಯಾಸ್ಪದ -ಡಿಕೆಶಿ

ಕನಕಪುರ: ಮೇಕೆದಾಟು ಅಣೆಕಟ್ಟು ನಿರ್ಮಾಣದ ವಿಷಯದಲ್ಲಿ ಕೇಂದ್ರ ನೀರಾವರಿ ಸಚಿವ ಶೇಖಾವತ್‍ರವರು ಎರಡು ರಾಜ್ಯಗಳು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರ ಹೇಳಿಕೆಗೆ ನಮ್ಮ ಮುಖ್ಯಮಂತ್ರಿಗಳು ಮೌನ ವಹಿಸಿರುವುದು ಯಾವ ನ್ಯಾಯ ಇವರ ಕೈಯಲ್ಲಿ ಮೇಕೆದಾಟು ವಿಚಾರವನ್ನು ಬಗೆಹರಿಸಲಾಗದಿದ್ದಲ್ಲಿ ರಾಜೀನಾಮೆ ನೀಡಲಿ ಎಂದು ಹೇಳಿದರು.

ತಮಿಳುನಾಡು ಸರ್ಕಾರ ಮೇಕೆದಾಟು ವಿಚಾರದಲ್ಲಿ ಯಾವುದೇ ಸಂಧಾನಕ್ಕೂ ಬರುವುದಿಲ್ಲ ಹಾಗಾಗಿ ಈ ವಿಚಾರ ಮತ್ತಷ್ಟು ಜಟಿಲವಾಗಲಿದೆ. ಕೇಂದ್ರ ಸರ್ಕಾರವೇ ಮಧ್ಯಪ್ರವೇಶಿಸಿ ಬಗೆಹರಿಸಬೇಕು, ಪರಿಸರ ಇಲಾಖೆಯಿಂದ ಅನುಮತಿ ಪಡೆದು ಯೋಜನೆಗೆ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.