ಬೀಗುತ್ತಿದ್ದ ಪಕ್ಷಕ್ಕೆ ಫಲಿತಾಂಶದ ಶಾಕ್: ಕಾಂಗ್ರೆಸ್ ಗೆ ಎಚ್ ಡಿ ಕೆ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಅಧಿಕಾರಕ್ಕೆ ಬಂದೇಬಿಟ್ಟೆವು ಎಂದು ಬೀಗುತ್ತಿದ್ದವರಿಗೆ ಪಂಚರಾಜ್ಯಗಳ ಫಲಿತಾಂಶ ಶಾಕ್ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ  ಟಾಂಗ್ ನೀಡಿದರು.

ಬೆಂಗಳೂರಿನಲ್ಲಿ ಪಂಚರಾಜ್ಯಗಳ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಮೀಕ್ಷೆಗಳು ಭವಿಷ್ಯ ನುಡಿದಂತೆ ಚುನಾವಣೆ ಫಲಿತಾಂಶ ಬರುತ್ತಿದೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಜ್ಞಾನೋದಯ ಮಾಡಿಕೊಳ್ಳುವ ಫಲಿತಾಂಶ ಇದಾಗಿದೆ ಎಂದು ಹೇಳಿದರು.

ಗೋವಾ, ಪಂಜಾಬ್ ನಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳುತ್ತಿದ್ದರು. ಕರ್ನಾಟಕದಿಂದ ಸೂತ್ರಧಾರರನ್ನು ಗೋವಾಗೆ ಕಳುಹಿಸಿದ್ದರು, ಜೆಡಿಎಸ್ ಮುಗಿಸಲು ಹೋದವರಿಗೆ ಈ ಚುನಾವಣಾ ಫಲಿತಾಂಶ ಪಾಠ ಕಲಿಸಿದೆ ಎಂದು ತಿಳಿಸಿದರು.

ನೀರಾವರಿ ವಿಚಾರಗಳನ್ನು ಮುಂದಿಟ್ಟುಕೊಂಡು ನಾವು  ಹೋರಾಟ ಮಾಡುತ್ತೇವೆ ಎಂದ ಕುಮಾರಸ್ವಾಮಿ ತಿಳಿಸಿದರು.

ಐದು ರಾಜ್ಯಗಳ ಪರಿಸ್ಥಿತಿ ಬೇರೆ, ನಮ್ಮ ರಾಜ್ಯಗಳ ಪರಿಸ್ಥಿತಿ ಬೇರೆ ಎಂದು ಹೇಳಿದರು.