ಹೈದರಾಬಾದ್: ತೆಲಾಂಗಣ ರಾಜ್ಯದ ಮುಖ್ಯ ಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಅವರನ್ನು ಹೈದರಾಬಾದ್ ನಲ್ಲಿರುವ ಯಶೋಧ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಪ್ಪತ್ತು ಮಂದಿ ವೈದ್ಯರು ನಿಗಾ ವಹಿಸಿದ್ದಾರೆ.
ಕೆ.ಸಿ.ಆರ್.ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಆಂಜಿಯೋಪ್ಲ್ಯಾಸ್ಟಿ ಮಾಡುವ ಸಾಧ್ಯತೆ ಇದೆ.
ಸಧ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಯಶೋಧ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

