ಮೈಸೂರು: ಅನುಮಾನಾಸ್ಪದವಾಗಿ ಹುಲಿಯೊಂದು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಹುಣಸೂರು ತಾಲೂಕು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬೇಣಿ ಹತ್ತು ಹಾಡಿ ಹಿಂಭಾಗ ಹುಲಿಯ ಮೃತದೇಹ ಪತ್ತೆ ಆಗಿದೆ.
ಹಾಡಿ ಹಿಂಭಾಗದ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ರಕ್ಷಕರು ಮತ್ತು ಸಿಬ್ಬಂದಿ ಗಸ್ತು ಮಾಡುತ್ತಿದ್ದಾಗ ಹುಲಿಯ ಮೃತದೇಹ ಕಂಡುಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಗಿದೆ.
ಹುಲಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

