ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ನಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದರು.
ನಮ್ಮ ಅಭ್ಯರ್ಥಿಗಳನ್ನು ಎಲ್ಲಾ ಕ್ಷೇತ್ರಗಳಲ್ಲೂ ಕಣಕ್ಕಿಳಿಸುತ್ತೇವೆ ಎರಡೂ ರಾಷ್ಟ್ರೀಯ ಪಕ್ಷಗಳೊಂದಿಗೆ ಮೈತ್ರಿ ಇಲ್ಲ ಅವುಗಳ ವಿರುಧ್ಧ ಹೋರಾಟವಷ್ಟೇ ಎಂದು ಗೌಡರು ಸ್ಪಷ್ಟಪಡಿಸಿದರು.
ಚುನಾವಣೆ ಸಂಬಂಧ ನಮ್ಮ ಕಾರ್ಕರ್ತರಿಗೆ ಜಾಗೃತಿ ಮೂಡಿಸಲಾಗುವುದು.ಈ ಹಿನ್ನೆಲೆಯಲ್ಲಿ ಮಾ.20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಮ್ಮದು ಪ್ರಾದೇಶಿಕ ಪಕ್ಷ ಇದನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತೇವೆ,ಜನತಾ ಜಲಧಾರೆ ಮೂಲಕ ಹೋರಾಟ ಮುಂದುವರಿಯಲಿದೆ ಎಂದು ಗೌಡರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ನಾಲ್ಕು ದಿಕ್ಕುಗಳಿಂದ ತಮ್ಮಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತದ್ದಾರೆ.ಅವರ ಕಾರ್ಯವನ್ನು ರೋಲ್ ಮಾಡೆಲ್ ಆಗಿ ತೆಗೆದುಕೊಳ್ಳಬೇಕು ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.
ನಾನು ಮುಖ್ಯ ಮಂತ್ರಿಯಾಗಿದ್ದೆ,ಪ್ರಧಾನ ಮಂತ್ರಿಯಾಗಿದ್ದೆ ಆಗಲೇ ನೀರಾವರಿ ಯೋಜನೆ ಆಗಲಿಲ್ಲ ಈಗ ಯಾರು ಏನು ಮಾಡಿಯಾರು ಎಂದು ಟಾಂಗ್ ನೀಡಿದರು.

