ಮೈಸೂರು: ಹೆಚ್ಚು ಸಾಲ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರತ ರತ್ನ ನೀಡಬೇಕೆಂದು ಶಾಸಕ ಸಾ.ರಾ.ಮಹೇಶ್ ವ್ಯಂಗ್ಯವಾಡಿದ್ದಾರೆ.
ಕೆ ಆರ್ ನಗರಿ ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೆಚ್ಚು ಸಾಲ ಮಾಡಿದ ಮಾಜಿ ಮುಖ್ಯಮಂತ್ರಿ ಅಂದರೆ ಅದು ಸಿದ್ದರಾಮಯ್ಯ.ಹಾಗಾಗಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಹೇಳಿದರು.
ಹಲವರು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳಾಗಿದ್ದವರು ಯಾರೂ ಮಾಡದಷ್ಟು ಸಾಲವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಎರಡು ಲಕ್ಷ ಕೋಟಿ ಸಾಲ ಮಾಡಿದ್ದಾರೆ. ರಾಜ್ಯದ ಬಜೆಟ್ ನಷ್ಟೇ ಸಿದ್ದರಾಮಯ್ಯ ಸಾಲ ಮಾಡಿದ್ದಾರೆ. ಆದರೂ ಜೆಡಿಎಸ್ ಬಗ್ಗೆ ಅವರು ಮಾತನಾಡುತ್ತಾರೆ ಎಂದು ಸಾರಾ ಟೀಕಿಸಿದರು.
ಇನ್ನು ಮುಂದೆ ಸಿದ್ದರಾಮಯ್ಯನವರು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಅವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

