ನವೀನ್ ಮೃತದೇಹ ತಾಯ್ನಾಡಿಗೆ ತರಲು ಪ್ರಧಾನಿ ಸೂಚನೆ

ನವದೆಹಲಿ: ಉಕ್ರೇನ್‍ನಲ್ಲಿ ರಷ್ಯಾ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್  ಮೃತದೇಹವನ್ನು ಭಾರತಕ್ಕೆ ತರಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಸಂಪುಟ ಸಭೆಯಲ್ಲಿ ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಮೋದಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದ ಪರಿಣಾಮ ವಿದ್ಯಾರ್ಥಿಗಳೆಲ್ಲರು ಬಂಕರ್ ಸೇರಿದ್ದರು. ಅಂತೆಯೇ ನವೀನ್ ಕೂಡ ಬಂಕರ್ ನಲ್ಲಿಯೇ ರಕ್ಷಣೆ ಪಡೆದಿದ್ದರು. ಆಹಾರ ತರಲೆಂದು ಹೊರಬಂದಾಗ ರಷ್ಯಾ ದಾಳಿಗೆ ನವೀನ್ ಬಲಿಯಾಗಿದ್ದರು.