ಬೆಂಗಳೂರು: ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ಮಹತ್ವದ ಐತಿಹಾಸಿಕ ತೀರ್ಪು ನೀಡಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ.
ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.
ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.

