ಹಿಜಬ್ ಪ್ರಕರಣದಲ್ಲಿ ಒಳ್ಳೆಯ ತೀರ್ಪು ಬಂದಿದೆ -ಬೊಮ್ಮಾಯಿ

ಬೆಂಗಳೂರು: ಶಾಲೆಗಳಲ್ಲಿ ಹಿಜಬ್ ಬಿಟ್ಟು ಸಮವಸ್ತ್ರ ಮಾತ್ರ‌ ಧರಿಸುವ ಕುರಿತು ನ್ಯಾಯಾಲಯ ಒಳ್ಳೆಯ ತೀರ್ಪು ನೀಡಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಹೈಕೋರ್ಟ್ ತೀರ್ಪು ಕುರಿತು ಪ್ರತಿ ಕ್ರಿಯಿಸಿದರು.

ಇದು ಮಕ್ಕಳ ಭವಿಷ್ಯ ಹಾಗೂ ಶಿಕ್ಷಣದ ಪ್ರಶ್ನೆ ,ಮಕ್ಕಳಿಗೆ ವಿದ್ಯೆಗಿಂತ ಬೇರೊಂದು ಇಲ್ಲ ,ನ್ಯಾಯಾಲಯದ ಆದೇಶವನ್ನು ಎಲ್ಲರು ಪಾಲಿಸಬೇಕು ಎಂದು ಮನವಿ ಮಾಡಿದರು.

ಎಲ್ಲರು ಸಹಕಾರ ಕೊಟ್ಟು ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಕೋರಿದರು.

ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಈ ತೀರ್ಪನ್ನು ಒಪ್ಪಿಕೊಳ್ಳಬೇಕು, ತೀರ್ಪಿನ ಅನ್ವಯ ಶಿಕ್ಷಣ ಕೂಡಲು ಎಲ್ಲರು ಸಹಕಾರ ಕೊಡಬೇಕು,ತರಗತಿ ಬಹಿಷ್ಕಾರ ಮಾಡದೆ, ಪರೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ಕರೆ ಬೊಮ್ಮಾಯಿ ಕರೆ ನೀಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಟ್ಟು ನಿಟ್ಟಾಗಿ ಮಾಡಿದ್ದೇವೆ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ತಕ್ಕ ಪಾಠ ಆಗಲಿದೆ ಸಿಎಂ ಎಚ್ಚರಿಕೆ ನೀಡಿದರು.